ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಜೂನ್ 30ರಂದು ಭಗೀರಥ ಜಯಂತಿ: ಪ್ರತಿಭಾ ಪುರಸ್ಕಾರ

Published 15 ಮೇ 2024, 15:20 IST
Last Updated 15 ಮೇ 2024, 15:20 IST
ಅಕ್ಷರ ಗಾತ್ರ

ರಾಯಚೂರು: ಭಗೀರಥ ಉಪ್ಪಾರ ಸಮಾಜ ಸಂಘದ ಜಿಲ್ಲಾ ಘಟಕದ ವತಿಯಿಂದ ಜೂನ್ 30ರಂದು ನಗರದ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಭಗೀರಥ ಜಯಂತಿ ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆದಿರಾಜ ಅದೋನಿ ತಿಳಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಉಪ್ಪಾರ ಸಮಾಜದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಜೂನ್ 20ರೊಳಗೆ ಅಂಕಪಟ್ಟಿಯ ಝರಾಕ್ಸ್ ಪ್ರತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9980775850, 9986710299 ಸಂಪರ್ಕಿಸಬಹುದು ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಮಾಜದ ಮುಖಂಡರಾದ ಎನ್.ಬುಗ್ಗಾರೆಡ್ಡಿ, ಮಾಣಿಕ್ಯಪ್ಪ, ಅಮರೇಶ ಅದೋನಿ, ಸಾಯಿ ಪ್ರಕಾಶ ಹಾಗೂ ಜುಕೂರ ಶ್ರೀನಿವಾಸ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT