ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ವಾಣಿಗೆ ಭಾರತ ರತ್ನ: ಮಂತ್ರಾಲಯದ ಸುಬುಧೇಂದ್ರ ತೀರ್ಥರು ಹರ್ಷ

Published 3 ಫೆಬ್ರುವರಿ 2024, 16:04 IST
Last Updated 3 ಫೆಬ್ರುವರಿ 2024, 16:04 IST
ಅಕ್ಷರ ಗಾತ್ರ

ರಾಯಚೂರು: ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ದೇಶದ ಪ್ರತಿಷ್ಠಿತ ಪುರಸ್ಕಾರವಾದ ಭಾರತ ರತ್ನ ಘೋಷಿಸಿದ್ದರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ‘ದೇಶದೆಲ್ಲೆಡೆ ಬಿಜೆಪಿಯ ಹಿಂದುತ್ವದ ವಿಶೇಷ ಚೇತನವನ್ನು ಮೂಡಿಸಿರುವ ಎಲ್‌.ಕೆ.ಅಡ್ವಾಣಿ ಅವರು ನಿಜವಾಗಿಯೂ ಅಭಿನಂದನಾರ್ಹರು. ಅವರ ಪರಿಶ್ರಮ, ಹೋರಾಟ ಮತ್ತು ಜನ ಜಾಗೃತಿ ಜಾತ್ರೆಯ ಪರಿಣಾಮವಾಗಿ ಇಂದು ಅಯೋಧ್ಯೆಯ ಶ್ರೀರಾಮಜನ್ಮಭೂಮಿ ಸ್ಥಳದಲ್ಲಿ ಮಂದಿರ ನಿರ್ಮಾಣವಾಗಿ ಬಾಲರಾಮ ದೇವರ ಮೂರ್ತಿಯ ಪ್ರತಿಷ್ಠಾಪನೆ ಆಗಿದೆ. ಅಂತಹ ಉತ್ತಮ ಸಾಧಕರಿಗೆ ದೇಶದ ಅತ್ಯುನ್ನತ ಗೌರವ ಲಭಿಸಿರುವುದು ಎಲ್ಲರಿಗೂ ಹೆಮ್ಮಯ ವಿಷಯವಾಗಿದೆ’ ಎಂದು ಹೇಳಿದ್ದಾರೆ.

ಭಾರತ ರತ್ನ ನೀಡಿ ಗೌರವಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯ ಅಭಿನಂದಾರ್ಹ. ಎಲ್‌.ಕೆ. ಅಡ್ವಾಣಿ ಅವರಿಗೆ ಭಗವಂತ ದೀರ್ಘಾಯುಷ್ಯ, ಆರೋಗ್ಯ ನೀಡಲಿ. ಅವರ ಮಾರ್ಗದರ್ಶನ ದೇಶಕ್ಕೆ ಹಾಗೂ ಹಿಂದೂ ಸಮಾಜಕ್ಕೆ ಎಂದಿಗೂ ಇರಲಿ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT