ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕು ಬೊಮ್ಮನಹಳ್ಳಿ ಗ್ರಾಮದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಮಹಿಳೆಯರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಮತ್ತು ಬೈಕ್ ಸವಾರ ಮೃತಪಟ್ಟಿದ್ದು, ಇನ್ನೊಬ್ಬ ಮಹಿಳೆ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೊಮ್ಮನಹಳ್ಳಿ ಗ್ರಾಮದ ಮಹದೇವಮ್ಮ (34) ಹಾಗೂ ಹನುಮಂತಪ್ಪ (24). ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ದುರಗಮ್ಮ ಅವರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.