ಗುರುವಾರ , ಡಿಸೆಂಬರ್ 3, 2020
20 °C

ರಾಯಚೂರು: 264 ಬೈಕ್‌, 20 ಕಾರುಗಳು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ರಾಯಚೂರು ನಗರ ಮತ್ತು ಸಿಂಧನೂರು ನಗರವನ್ನು ಸಂಪೂರ್ಣ ಲಾಕ್‌ಡೌನ್ ಮಾಡಿದ್ದರೂ ಅನವಶ್ಯಕವಾಗಿ ಸಂಚರಿಸಿದ 264 ಬೈಕ್‌ಗಳನ್ನು 20 ಕಾರಗಳು ಹಾಗೂ 15 ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಂದೇ ದಿನದಲ್ಲಿ ಒಟ್ಟು ₹52,100 ದಂಡ ವಿಧಿಸಲಾಗಿದೆ. ಮಾಸ್ಕ್ ಇಲ್ಲದೆ ಸಂಚರಿಸಿದಕ್ಕಾಗಿ 74 ಪ್ರಕರಣಗಳನ್ನು ದಾಖಲಿಸಿ ₹11,200 ದಂಡ ವಿಧಿಸಲಾಗಿದೆ. ಆಟೋಗಳಲ್ಲಿ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಆಟೋ ಚಾಲಕರು ಸಂಚರಿಸುವುದನ್ನು ನಿಲ್ಲಿಸಬೇಕು. ಒಂದು ವಾರ ಲಾಕ್‌ಡೌನ್ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಅನಾವಶ್ಯಕವಾಗಿ ಸಂಚರಿಸಬಾರದು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು