ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ಗೆ ಕೋವಿಡ್ ದೃಢ

Last Updated 11 ಏಪ್ರಿಲ್ 2021, 11:18 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಕೋವಿಡ್ ದೃಢವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಾಕಿದ್ದಾರೆ.

'ಮಾನ್ಯ ಮತದಾರ ಬಂಧುಗಳಲ್ಲಿ ನನ್ನ ಕಳಕಳಿಯ ಮನವಿ.

ನನಗೆ ಕೊವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆಪ್ರತ್ಯೇಕವಾಗಿ ಇದ್ದೇನೆ.ಯಾರೂ ಆತಂಕ ಪಡಬೇಕಾಗಿಲ್ಲ, ಶೀಘ್ರ ಗುಣಮುಖನಾಗಿ ಬರುತ್ತೇನೆ.17 ರಂದು‌‌ ಮತದಾನ ಇದ್ದು ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ. ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ.

ನಮಸ್ಕಾರ

ಪ್ರತಾಪಗೌಡ ಪಾಟೀಲ

ಬಿಜೆಪಿ ಅಭ್ಯರ್ಥಿ ಮಸ್ಕಿ'

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT