ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಹಣ ಹಂಚಿಕೆ ಪ್ರಕರಣ: ಮಸ್ಕಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Last Updated 9 ಏಪ್ರಿಲ್ 2021, 9:31 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಮಾಡುತ್ತಿದ್ದು, ಕೂಡಲೇ ಚುನಾವಣಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಮಸ್ಕಿಯಲ್ಲಿ ಕಾಂಗ್ರೆಸ್‌ ಮುಖಂಡರು ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪಟ್ಟಣದ ಕನಕವೃತ್ತದಿಂದ ಚುನಾವಣಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಬಿಜೆಪಿ ಸರ್ಕಾರದ ವಿರುದ್ಧ, ಪ್ರತಾಪಗೌಡ ಪಾಟೀಲ ವಿರುದ್ಧ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಶಾಸಕರಾದ ಕೃಷ್ಣ ಭೈರೇಗೌಡ, ಯು.ಟಿ.ಖಾದರ, ಮುಖಂಡರಾದ ಎಚ್‌.ಎಂ.ರೇವಣ್ಣ, ಅಮರೇಗೌಡ ಬಯ್ಯಾಪುರ ಮಾತನಾಡಿದರು.

ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ನಾಯಕ್‌, ಎಐಸಿಸಿ ಕಾರ್ಯದರ್ಶಿ ಎನ್.ಎಸ್‌.ಬೋಸರಾಜ, ಮುಖಂಡರಾದ ಹಂಪನಗೌಡ ಬಾದರ್ಲಿ, ಶಿವರಾಜ ತಂಗಡಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗ್ರಾಮೀಣ ಬ್ಲಾಕ್‌ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ರವಿ ಬೋಸರಾಜ, ಪಾಮಯ್ಯ ಮುರಾರಿ, ಎಚ್‌.ಬಿ.ಮುರಾರಿ, ಆರ್‌.ಬಸನಗೌಡ ಮತ್ತಿತರರು ಇದ್ದರು.

ವೈರಲ್‌ ಆಗಿರುವ ಹಣ ಹಂಚಿಕೆ ವಿಡಿಯೊ–

ಪ್ರತಿಭಟನೆಯಿಂದಾಗಿ ಪಟ್ಟಣದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು.

ತುರ್ವಿಹಾಳ ಮತ್ತು ಬಳಗಾನೂರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಳ್ಳದ ಪಿಎಸ್‌ಐಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಚುನಾವಣಾಧಿಕಾರಿ ಮತ್ತು ಪೊಲೀಸ್‌ ಆಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT