ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ, ಹಲವು ಗೊಂದಲ, ಅಸಮಾಧಾನ, ಆಂತರಿಕ ಕಚ್ಚಾಟ ನಡೆಯುತ್ತಿರುದರಿಂದ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.

ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಿಲ್ಲ. ಭ್ರಷ್ಟಾಚಾರ ಆರೋಪ ಹೊತ್ತ ಶಶಿಕಲಾ ಜೊಲ್ಲೆ ಅವರಿಗೆ ಪುನಃ ಸಚಿವ ಸ್ಥಾನ ನೀಡುವ ಮೂಲಕ ಭ್ರಷ್ಟಾಚಾರವನ್ನು ಪೋಷಣೆ ಮಾಡುತ್ತಿದೆ ಎಂದರು.

ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿದ್ದ ಸರ್ಕಾರ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಸ್ವಜನ ಪಕ್ಷಾಪಾತ, ಕೋವಿಡ್ ನಿರ್ವಹಣೆಯಲ್ಲಿಯೂ ವಿಫಲವಾಗಿತ್ತು. ಈಶ್ವರಪ್ಪ ಸೇರಿ ಹಲವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡು ಹೈಕಮಾಂಡ್ ಗೆ ದೂರು ನೀಡಿದ್ದರು. ಈ ಹಿಂದೆ ಬಿಜೆಪಿ ಸರ್ಕಾರ ಮೂವರು ಮುಖ್ಯಮಂತ್ರಿಗಳನ್ನು ನೀಡಿತ್ತು. ಈ ಬಾರಿ ಇಬ್ಬರು ಮುಖ್ಯಮಂತ್ರಿಗಳ ಬದಲಾವಣೆಯಾಗಿದೆ ಎಂದು ಹೇಳಿದರು.

ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳು ಕಾಂಗ್ರೆಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರು ಬದಲಾವಣೆ ಮಾಡುತ್ತಿರುವುದು ಖಂಡನೀಯ. ಹೊಸ ಯೋಜನೆಗಳು ಜಾರಿಗೆ ತಂದರೆ ತಮ್ಮ ಪಕ್ಷದ ಪ್ರಮುಖರ ಹೆಸರು ಇಡಲಿ ಎಂದರು.

ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ, ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ಶಾಸಕ ದದ್ದಲ ಬಸವನಗೌಡ, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಕೆಪಿಸಿಸಿ ವಕ್ತಾರ ಎ.ವಸಂತಕುಮಾರ್, ಮಾಜಿ ಶಾಸಕರಾದ ಸೈಯದ್ ಯಾಸೀನ್, ಶರಣಪ್ಪ ಮಟ್ಟೂರು, ಹಂಪನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಈ.ವಿನಯಕುಮಾರ, ರವಿ ಬೋಸರಾಜು, ಜಯವಂತರಾವ್ ಪತಂಗೆ, ಅಮರೇಗೌಡ ಹಂಚಿನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.