ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಬಿಜೆಪಿ ಮುಖಂಡ ಶೇಖರಗೌಡ ಕಾಟಗಕ್ ನಿಧ‌ನ

Last Updated 21 ಮೇ 2022, 4:42 IST
ಅಕ್ಷರ ಗಾತ್ರ

ಮಸ್ಕಿ: ಬಿಜೆಪಿ ಎಸ್‌ಟಿ ಮೊರ್ಚದ ತಾಲ್ಲೂಕು ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಕಾಟಗಲ (40) ಶುಕ್ರವಾರ ನಿಧನರಾದರು.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಸಂಬಂಧ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ದೇವಸ್ಥಾನವೊಂದರಲ್ಲಿ ಊಟಕ್ಕೆ ತೆರಳಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಾಭಿಮಾನಿ ವಾಲ್ಮೀಕಿ ಸಂಘದ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಕಾಟಗಲ್ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT