ಸಿಂಧನೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸಂಚು ಮತ್ತು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ವತಿಯಿಂದ ಇಲ್ಲಿನ ಪ್ರವಾಸಿ ಮಂದಿರದಿಂದ ಮಿನಿವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಬಿಜೆಪಿ ಮುಖಂಡ ಕೆ.ಕರಿಯಪ್ಪ ಮಾತನಾಡಿ,‘ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ದುರುದ್ದೇಶದಿಂದ ಕೆಲ ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಇದರ ಹಿಂದೆ ಹಿಂದೂಗಳ ಶ್ರದ್ಧಾ–ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ’ ಎಂದು ಆರೋಪಿಸಿದರು.

‘ಇಂಥ ದೃಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಿದ್ರಾಮೇಶ ಮನ್ನಾಪುರ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮನವಿ ಪತ್ರ ಸ್ವೀಕರಿಸಿದರು.

ಪಿಕಾರ್ಡ್ ಬ್ಯಾಂಕ್ನ ಅಧ್ಯಕ್ಷ ಎಂ.ದೊಡ್ಡಬವರಾಜ, ಗ್ರಾಮೀಣ ಮಂಡಲ ಅಧ್ಯಕ್ಷ ಯಂಕೋಬ ನಾಯಕ, ಮುಖಂಡರಾದ ಬಿ.ಶ್ರೀಹರ್ಷ, ಪರಮೇಶಪ್ಪ ಆದಿಮನಿ, ಮಧ್ವರಾಜ್ ಆಚಾರ್ಯ, ಟಿ.ಸುಬ್ಬರಾವ್, ಶರಣಪ್ಪ ಧುಮತಿ, ಸೋಮಣ್ಣ ಪತ್ತಾರ್, ಮಲ್ಲಿಕಾರ್ಜುನ ಕಾಟಗಲ್, ಶಿವು ಹಿರೇಮಠ, ಮಂಜುನಾಥ ಗಾಣಿಗೇರ, ಸರ್ವೇಶ್, ರುದ್ರಗೌಡ, ಪ್ರೇಮಾ ಸಿದ್ದಾಂತಿಮಠ, ಮಮತಾ ಹಿರೇಮಠ, ಜಯಶ್ರೀ ರೆಡ್ಡಿ, ಭಾಸ್ಕರ್, ಸಹನಾ ಹಿರೇಮಠ, ಎಸ್.ಎಸ್.ಹಿರೇಮಠ ಹಾಗೂ ಸಿದ್ಧಲಿಂಗಯ್ಯ ಸ್ವಾಮಿ ವಕೀಲ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.