ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿಭಟನೆ

Last Updated 3 ನವೆಂಬರ್ 2021, 14:49 IST
ಅಕ್ಷರ ಗಾತ್ರ

ರಾಯಚೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಿಶಿಷ್ಟರ ಕುರಿತು ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಘಟಕದಿಂದ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ವಿಜಯಪುರ ಜಿಲ್ಲೆಯ ಸಿಂದಗಿ ಉಪಚುನಾವಣೆಯ ಪ್ರಚಾರದ ವೇಳೆ ‘ಪರಿಶಿಷ್ಟ ನಾಯಕರು ಹೊಟ್ಟೆ ಪಾಡಿನ ಸಲುವಾಗಿ ಬಿಜೆಪಿ ಪಕ್ಷ ಸೇರಿದ್ದಾರೆ’ ಎನ್ನುವ ಹೇಳಿಕೆ ನೀಡಿದ್ದು ಖಂಡನೀಯವಾಗಿದೆ. ಇದು ಪರಿಶಿಷ್ಟರಿಗೆ ಮಾಡಿದ ಅವಮಾನ, ಎಲ್ಲಾ ಜನಾಂಗ, ಧರ್ಮದವರು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಸಿದ್ದರಾಮಯ್ಯನವರು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಹಾಗೂ ಪರಿಶಿಷ್ಟರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

60 ವರ್ಷಗಳಿಂದ ಪರಿಶಿಷ್ಟರು ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಬಳಸಿಕೊಂಡಿದೆ. ಸಮಾಜದ ಮಲ್ಲಿಕಾರ್ಜುನ ಖರ್ಗೆಯ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಯತ್ನಿಸಿದಾಗ ಸಿದ್ದರಾಮಯ್ಯನವರು ರಾಜಕೀಯವಾಗಿ ಮೂಲೆಗುಂಪು ಮಾಡಿದ್ದಾರೆ. ಜಿ.ಪರಮೇಶ್ವರ ಅವರು ವಿಧಾನಸಭೆಯ ಚುನಾವಣೆಯಲ್ಲಿ ಗೆದ್ದರೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ಕಾರಣಕ್ಕೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರ ಮೂಲಕ ಪರಮೇಶ್ವರ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಪಕ್ಷದಲ್ಲಿ ಪರಿಶಿಷ್ಟ ನಾಯಕರಿಗೆ ಸಚಿವ ಸ್ಥಾನ ನಿಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆ ಜಾರಿ ಮಾಡುತ್ತಿದೆ. ಕೂಡಲೇ ಸಿದ್ದರಾಮಯ್ಯನವರು ಪರಿಶಿಷ್ಟರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ. ಶರಣಬಸವ, ಜಿಲ್ಲಾ ಕಾರ್ಯದರ್ಶಿ ಶಾಂತಕುಮಾರ ಉಪ್ರಾಳ, ಡಿ. ಚಿನ್ನಿ, ಭೀಮಣ್ಣ, ಎಂ. ಮಾರೆಪ್ಪ, ನವೀನ್ ಕುಮಾರ ಕುರ್ಡಿ, ಎನ್. ಜಗದೀಶ ಅಸ್ಕಿಹಾಳ, ವೀರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT