ಬಿಜೆಪಿ ಅಧಿಕಾರಕ್ಕೆ ಬಂದರೆ ಆಪತ್ತು: ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ

ಭಾನುವಾರ, ಏಪ್ರಿಲ್ 21, 2019
32 °C

ಬಿಜೆಪಿ ಅಧಿಕಾರಕ್ಕೆ ಬಂದರೆ ಆಪತ್ತು: ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ

Published:
Updated:
Prajavani

ಹಟ್ಟಿಚಿನ್ನದಗಣಿ: ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದುಕೋಂಡು ಐದು ವರ್ಷ ಅಭಿವೃದ್ದಿ ಕಾರ್ಯಗಳನ್ನು ಮಾಡದೆ ಸುಳ್ಳು ಭರವಸೆಗಳನ್ನು ಜನರಿಗೆ ನೀಡುವ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಆಪತ್ತು ಎಂದು ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಹೇಳಿದರು.

ಪಟ್ಟಣದ ಕೋಠಾ ಕ್ರಾಸ್‌ನಲ್ಲಿ ಪೈಭವನದಲ್ಲಿ ಗುರುವಾರ ಏರ್ಪಡಿಸಿದ್ದ ಲೋಕಸಭೆ ಚುನಾವಣೆ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಪ್ಪು ಹಣ ತರುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೋಟು ರದ್ದು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆದ ನಷ್ಟದ ಬಗ್ಗೆಯೂ ಲೋಕಸಭೆಯಲ್ಲಿ ಮಾತನಾಡಲಿಲ್ಲ. ಜನಧನ ಯೋಜನೆಯಿಂದ ಯಾರಿಗೂ ಉಪಯೋಗವಾಗಿಲ್ಲ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ ಮಾತನಾಡಿ,  ಸುಳ್ಳು ಆಸ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದಿಂದ ಅಭಿವೃದ್ದಿ ಸಾಧ್ಯವಿಲ್ಲ.  ಹೈದರಾಬಾದ್‌ ಕರ್ನಾಟಕ್ಕೆ 371 ಜೆ ಕಲಂ ನೀಡಿದ್ದು ಕಾಂಗ್ರೆಸ್‌ ಸರ್ಕಾರ. ಎಚ್‌ಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ಸಾಕಷ್ಟು ಹಣವನ್ನು ಅಭಿವೃದ್ದಿಗಾಗಿ ನೀಡಿದ್ದೇವೆ.  ಕುಡಿಯುವ ನೀರು, ಶಿಕ್ಷಣ ರಸ್ತೆ, ಚರಂಡಿ ಸೇರಿದಂತೆ ಕೃಷಿಗೆ ಆದ್ಯತೆ ನೀಡಲಾಗುವುದು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಮತ ನಿಡಿ ಎಂದು ಮನವಿ ಮಾಡಿದರು.

ಜೆಡಿಎಸ್ ಮುಖಂಡ ಸಿದ್ದು ಬಂಡಿ ಮಾತನಾಡಿದರು.

ಕಾಂಗ್ರೆಸ್‌ ಮುಖಂಡರಾದ ಪಾಮಯ್ಯ ಮುರಾರಿ, ಮುದುಕಪ್ಪ ವಕೀಲ್, ಡಾ.ರಂಗನಾಥ, ಪಟ್ಟಣ ಪಂಚಾಯ್ತಿ ಅಧ್ಯಕ್ಷ  ಶಂಕರಗೌಡ ಬಳಗನೂರು, ಹನುಮಂತರೇಡ್ಡಿ, ಮೌಲಸಾಭ್, ಜೆಡಿಎಸ್ ಪಕ್ಷದ ಮುಖಂಡರು ಇದ್ದರು.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !