ಸಿಎಂ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ

ಶನಿವಾರ, ಜೂಲೈ 20, 2019
27 °C

ಸಿಎಂ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ

Published:
Updated:
Prajavani

ರಾಯಚೂರು: ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವು ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ 11 ಶಾಸಕರು ಮತ್ತ ಜೆಡಿಎಸ್‌ನಿಂದ ಮೂವರು ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅತಂತ್ರ ಸ್ಥಿತಿ ನಿರ್ಮಾಣ ಆಗಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದು ಸರಿಯಾದ ಕ್ರಮವಲ್ಲ ಎಂದರು.

ಸರ್ಕಾರವು ಸಂಖ್ಯಾಬಲ ಕಳೆದುಕೊಂಡಿದ್ದರೂ ಯಾವುದೇ ಸಂಬಂಧವಿಲ್ಲದಂತೆ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಮುಖಂಡರಾದ ಎ.ಪಾಪಾರೆಡ್ಡಿ, ಆರ್‌. ತಿಮ್ಮಯ್ಯ, ಯು. ದೊಡ್ಡಮಲ್ಲೇಶಪ್ಪ, ಶಿವಬಸಪ್ಪ ಮಾಲಿಪಾಟೀಲ, ಆರ್‌.ಕೆ. ಅಮರೇಶ. ರಾಮಚಂದ್ರ, ಪಿ.ಶ್ರೀನಿವಾಸ, ನರಸಪ್ಪ ಯಕ್ಲಾಸಪುರ, ಸುದರ್ಶನ, ಪ್ರದೀಪ, ಬಂಗಿ ಮುನಿರೆಡ್ಡಿ, ಮುಕ್ತಿಯಾರ್‌ ಹಾಗೂ ಶರಣಮ್ಮ ಕಾಮರೆಡ್ಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !