ಸಿಂಧನೂರು: ಬಿಜಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಲು ಮಹಿಳೆಯರು ಶಕ್ತಿಮೀರಿ ಶ್ರಮಿಸಬೇಕು ಎಂದು ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ವಿಜಯ ರಾಜೇಶ್ವರಿ ಕರೆ ನೀಡಿದರು.

ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಮಹಿಳಾ ಮೋರ್ಚಾ ನಗರ ಮತ್ತು ಗ್ರಾಮೀಣ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಸರ್ವ ಜನಾಂಗಗಳ ಕಲ್ಯಾಣಕ್ಕಾಗಿ ಯೋಜನೆಗಳು ಜಾರಿಗೊಂಡಿವೆ. ಮಹಿಳೆಯರು ಪಕ್ಷದ ಸಾಧನೆಯನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡುವ ಮೂಲಕ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಿಸಿ ಗೆಲ್ಲಿಸಲು ದುಡಿಯಬೇಕು ಎಂದು ಹೇಳಿದರು.

ಬಿಜೆಪಿ ಮಹಿಳಾ ಜಿಲ್ಲಾ ಮೋರ್ಚಾ ಉಸ್ತುವಾರಿ ಶಾರದಾ ರಾಠೋಡ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕಾಟಾವಾ, ಸುಷ್ಮಾ, ಜಿಲ್ಲಾ ಘಟಕದ ಉಪಾಧ್ಯಕ್ಷೆ ಮಮತಾ ಹಿರೇಮಠ, ಬಿಜೆಪಿ ಗ್ರಾಮಿಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಮಂಡಲ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ನೀಲಮ್ಮ ಅಲಬನೂರು, ನಗರ ಮೋರ್ಚಾ ಅಧ್ಯಕ್ಷೆ ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಮಂಗಮ್ಮ ಹೊಸಳ್ಳಿ ಕ್ಯಾಂಪ್, ಸದಸ್ಯರಾದ ರಾಕಿ, ನಂದಿ, ಜಯಶ್ರೀ ರೆಡ್ಡಿ, ಸುಭದ್ರಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.