ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್: ವಿದ್ಯುತ್ ಪರಿವರ್ತಕದಲ್ಲಿ ಸ್ಪೋಟ

Last Updated 16 ಏಪ್ರಿಲ್ 2021, 12:19 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್‌) 8ನೇ ವಿದ್ಯುತ್ ಘಟಕದ ಏರಿಯಾದಲ್ಲಿ ಗುರುವಾರ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಸ್ಪೋಟ ಕಾಣಿಸಿಕೊಂಡಿತು.

ಒಂದು ವರ್ಷದಿಂದ ತಾಂತ್ರಿಕ ಸಮಸ್ಯೆಯಿಂದಾಗಿ 250 ಮೆಗಾವಾಟ್ ಸಾಮರ್ಥ್ಯದ ಎಂಟನೇ ಘಟಕದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ದುರಸ್ತಿ ಕಾರ್ಯ ಕೈಗೆತ್ತಿಕೊಂಡು, ಎರಡು ದಿನಗಳ ಹಿಂದೆ ಉತ್ಪಾದನೆ ಆರಂಭಿಸಿದರು.

ಗುರುವಾರ ಬೆಳಿಗ್ಗೆ 9.30ಕ್ಕೆ ವಿದ್ಯುತ್ ಘಟಕದ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಹೆಚ್ಚಿನ ಲೋಡ್ ಬಿದ್ದ ಕಾರಣ, ಸ್ಪೋಟಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ವಿದ್ಯುತ್ ಪರಿವರ್ತಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದರು. ಆರ್‌ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ವೆಂಕಟಚಲಾಪತಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಪೋಟದಿಂದ ಬೆಂಕಿಯಲ್ಲಿ ಸುಟ್ಟು ಹೋದ ವಿದ್ಯುತ್ ಪರಿವರ್ತಕ ಬದಲಾಯಿಸಿ, ಬೇರೆ ವಿದ್ಯುತ್ ಪರಿವರ್ತಕ ಅಳವಡಿಸಿ, ತಕ್ಷಣವೇ ದುರಸ್ತಿ ಕಾರ್ಯ ಕೈಗೆತ್ತಿಕೊಂಡು ಉತ್ಪಾದನೆಗೆ ಅನುವು ಮಾಡಿಕೊಡಬೇಕು ಎಂದು ಕೆ.ವಿ.ವೆಂಕಟಚಲಾಪತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸದ್ಯ 8ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಂಡಿದ್ದು ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT