ಶಕ್ತಿನಗರ (ರಾಯಚೂರು ಜಿಲ್ಲೆ): ಪೆದ್ದಕುರಂ (ಕುರ್ವಕುಲ) ಗ್ರಾಮ ಸಮೀಪದ ಕೃಷ್ಣಾನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ಬಾಲಕಿ ಸೇರಿ ನಾಲ್ವರು ನಾಪತ್ತೆಯಾಗಿದ್ದಾರೆ.

ತೆಲಂಗಾಣ ರಾಜ್ಯದ ಮಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. 9 ಜನರನ್ನು ರಕ್ಷಿಸಲಾಗಿದೆ.

‘ಎಲ್ಲರೂ ರಾಯಚೂರು ತಾಲ್ಲೂಕಿನ ಗಡಿಪ್ರದೇಶದ ಪೆದ್ದಕುರಂ ಗ್ರಾಮದವರಾಗಿದ್ದು, ಬಾಲಕಿ ಮತ್ತು ಮೂವರು ಮಹಿಳೆಯರು ಕಾಣೆಯಾಗಿದ್ದಾರೆ. ಅವರಿಗಾಗಿ ಶೋಧ ಮುಂದುವರೆದಿದೆ. ಎನ್ಡಿಆರ್ಎಫ್ ತಂಡ ಮತ್ತು ಯಾಪಲದಿನ್ನಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ತಹಶೀಲ್ದಾರ ಡಾ.ಹಂಪಣ್ಣ ಸಜ್ಜನ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.