ಭಾನುವಾರ, ಏಪ್ರಿಲ್ 11, 2021
32 °C

14ರಂದು ರಾಜ್ಯಮಟ್ಟದ ದೇಹಧಾರ್ಡ್ಯ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್ ವತಿಯಿಂದ ಮಾರ್ಚ್ 14ರಂದು ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಶನ್ ಕಾರ್ಯದರ್ಶಿ ಸುಧಾಕರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿಯೇ ರಾಜ್ಯಮಟ್ಟದ ದೇಹಧಾರ್ಡ್ಯ ಸ್ಪರ್ಧೆ ನಡೆಯಲಿದ್ದು ಆನಂತರ ವಿಶಾಖಪಟ್ಟಣಮ್‌ನಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಲಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ರಾಷ್ಟ್ರಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ.

ವಿಜೇತರಿಗೆ ಮಿಸ್ಟರ್ ಪಂಚಮುಖಿ ಪ್ರಶಸ್ತಿ ನೀಡಲಾಗುವುದು. ಪುರುಷ, ಮಹಿಳಾ, ವಿಕಲಚೇತನರು ಸೇರಿ ವಿವಿಧ 8 ವಿಭಾಗಗಳ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶಾಸಕ ಸತೀಶ ಜಾರಕಿಹೊಳಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ₹200 ನೋಂದಣಿ ಶುಲ್ಕವಿದ್ದು 200ರಿಂದ ಸ್ಪರ್ಧಿಗಳು ಪಾಲ್ಗೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಅಸೋಸಿಯೇಶನ್ ಅಧ್ಯಕ್ಷ ಮಂಜುನಾಥ ಹಾನಗಲ್, ಸಂಪತ್ ಕುಮಾರ, ತಾರಾನಾಥ, ವಿನೋದಕುಮಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು