ರಾಯಚೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಕುರಿತು ಕೇಂದ್ರ ಸರfಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಗುರುವಾರ ಮನವಿ ಸಲ್ಲಿಸಿದ್ದಾರೆ.

ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನ ಪ್ರತಿನಿಧಿಸುವ ಭಗವಂತ ಖೂಬಾ ಅವರನ್ನ ಭೇಟಿಯಾಗಿ, ರಾಯಚೂರಿನಲ್ಲಿ ಏಮ್ಸ್ ನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಮನ್ಸೂಖ್ ಮಂಡವಿಯಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಭಾಗದ ಜನರ ಚಿಕಿತ್ಸೆಗಾಗಿ ಏಮ್ಸ್ ಅವಶ್ಯಕತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮನವೊಲಿಸಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ರಾಯಚೂರು ಜಿಲ್ಲೆಯಲ್ಲಿ ₹22.25 ಕೋಟಿ ವೆಚ್ಚದಲ್ಲಿ ಕೆಟಗರಿ – 2, ಟೈಪ್ ಬಿ ವಿಜ್ಞಾನ ಕೇಂದ್ರ ಸ್ಥಾಪನೆ, ಯಾದಗಿರಿ ಜಿಲ್ಲೆಯಲ್ಲಿ ಟೈಪ್ ಬಿ ಕೆಟಗರಿ – 3 ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನ ಕೇಂದ್ರ ಸಚಿವರು ನೀಡಿದ್ದಾರೆ ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.

ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರವೇ ಒಪ್ಪಿಗೆ ನೀಡಬೇಕು ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಸಂಸದ ರಾಜಾ ಅಮರೇಶ್ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.