ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣನ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ: ರಂಭಾಪುರಿ ಪೀಠದ ಶಿವಾಚಾರ್ಯ ಸ್ವಾಮೀಜಿ

Published 21 ಜನವರಿ 2024, 19:41 IST
Last Updated 21 ಜನವರಿ 2024, 19:41 IST
ಅಕ್ಷರ ಗಾತ್ರ

ರಾಯಚೂರು: ‘ಬಸವಣ್ಣನ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅದನ್ನು ಎಲ್ಲರೂ ಅರಿಯಬೇಕು. ಜನರು ಆಚಾರ, ವಿಚಾರ ಮರೆತು ನಡೆಯುತ್ತಿದ್ದಾರೆ. ರೇಣುಕಾಚಾರ್ಯರು ಹೇಳಿದ ತತ್ವ, ಸಿದ್ಧಾಂತಗಳು ಹಾಗೂ 12ನೇ ಶತಮಾನದ ಶರಣರು ಹೇಳಿದ ವಿಚಾರಧಾರೆಗಳು ಬೇರೆಯಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ರಾಚೋಟಿವೀರ ಶಿವಾಚಾರ್ಯ ಮಂಗಳ ಭವನವನ್ನು ಭಾನುವಾರ ಉದ್ಘಾಟಿಸಿ ಆಶೀವರ್ಚನ ನೀಡಿದರು.

‘ವೀರಶೈವ ಧರ್ಮದ ಒಳಪಂಗಡಗಳು ಬೆಳೆಯಬೇಕು ಎನ್ನುವ ಅಪೇಕ್ಷೆ ತಪ್ಪಲ್ಲ. ಧರ್ಮದ ತಳಹದಿ ಮೇಲೆ ಒಳಪಂಗಡಗಳನ್ನು ಸಂಘಟಿಸುವ ಕೆಲಸವಾಗಬೇಕು. ಇಂದು ಜನರು ಜಾತಿಗೆ ಕೊಡುವಷ್ಟು ಪ್ರಾಮುಖ್ಯತೆ ಧರ್ಮಕ್ಕೆ ಕೊಡುತ್ತಿಲ್ಲ. ಮೂಲ ಧರ್ಮಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ ಮಾಡಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT