ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀರಿನ ಕಾಮಗಾರಿ ಶೀಘ್ರ ಮುಗಿಸಿ’

Last Updated 6 ಜುಲೈ 2022, 4:03 IST
ಅಕ್ಷರ ಗಾತ್ರ

ಮುದಗಲ್: ‘ಅಂಕನಾಳ ಗ್ರಾಮದಲ್ಲಿ ನನೆಗುದಿಗೆ ಬಿದ್ದ ಕುಡಿಯುವ ನೀರಿನ ಕಾಮಗಾರಿ ಶೀಘ್ರವೇ ಮುಗಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಗುತ್ತಿಗೆದಾರರಿಗೆ ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.

ಗ್ರಾಮದಲ್ಲಿ ಈ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿಯಿಂದ ನರೇಗಾ ಕಾರ್ಮಿಕರಿಗೆ ಬದು ನಿರ್ಮಾಣ, ಕೃಷಿ ಹೊಂಡ ಹಾಗೂ ದನದ ಶೆಡ್ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ನೀಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಣ್ಣ ಗಬ್ಬೂರು ಅವರಿಗೆ ಸೂಚಿಸಿದರು.

ಹಲಕಾವಟಗಿ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು.

ಜಿ.ಪಂ. ಎಂಜಿನಿಯರ್ ಲಿಂಗನಗೌಡ ಪಾಟೀಲ, ತಾಂತ್ರಿಕ ಎಂಜಿನಿಯರ್ ವೀರನಗೌಡ ಪಾಟೀಲ, ಗ್ರಾಮಸ್ಥರಾದ ಹನುಮೇಶ ಗೌಂಡಿ ಹಾಗೂ ಪರುಶುರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT