ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ವಿ | ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಬಸ್: ಹಲವರಿಗೆ ಗಾಯ

Published 4 ಆಗಸ್ಟ್ 2024, 14:33 IST
Last Updated 4 ಆಗಸ್ಟ್ 2024, 14:33 IST
ಅಕ್ಷರ ಗಾತ್ರ

ಮಾನ್ವಿ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ರಾಜ್ಯ ಹೆದ್ದಾರಿ ಪಕ್ಕದ ಜಮೀನಿಗೆ ನುಗ್ಗಿದ ಘಟನೆ ತಾಲ್ಲೂಕಿನ ನಸಲಾಪುರ ಗ್ರಾಮದ ಸಮೀಪ ಭಾನುವಾರ ಸಂಭವಿಸಿದೆ.

ಚಾಲಕ, ನಿರ್ವಾಹಕ ಸೇರಿದಂತೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಾನ್ವಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡ ಎಂಟು ಜನ ಪ್ರಯಾಣಿಕರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಬಸ್ ಮಾನ್ವಿಯಿಂದ ಗಂಗಾವತಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಜಿ.ಹಂಪಯ್ಯ ನಾಯಕ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT