ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ | ಸಮಯಕ್ಕೆ ಬಾರದ ಬಸ್: ವಿದ್ಯಾರ್ಥಿಗಳ ಪ್ರತಿಭಟನೆ

Published 23 ಜನವರಿ 2024, 14:12 IST
Last Updated 23 ಜನವರಿ 2024, 14:12 IST
ಅಕ್ಷರ ಗಾತ್ರ

ಮಸ್ಕಿ: ತಾಲ್ಲೂಕಿನ ಬೈಲಗುಡ್ಡ ಗ್ರಾಮದಲ್ಲಿ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಬಸ್ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.

ಪರೀಕ್ಷೆಗಳು ಆರಂಭವಾಗಿದ್ದರಿಂದ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ಬಿಡದ ಕಾರಣ ಶಾಲಾ–ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಈಶಾನ್ಯ ಸಾರಿಗೆ ಸಂಸ್ಥೆ ಮಸ್ಕಿ ಘಟಕದ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದರು.

ಬೈಲಗುಡ್ಡ ಒಂದೇ ಗ್ರಾಮದಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಸ್ಕಿ ಪಟ್ಟಣಕ್ಕೆ ಬರುತ್ತಾರೆ. ಮಂಗಳವಾರ ಬಸ್ ತಡವಾಗಿ ಬಂದಿದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಆಗುವಂತಾಗಿದೆ ಎಂದು ದೂರಿದ್ದಾರೆ.

ಕೂಡಲೇ ಸ್ಥಳೀಯ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಶಾಲಾ–ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಓಡಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮಸ್ಕಿಯ ರಸ್ತೆಯಲ್ಲಿ ಸಂಚಾರ ತಡೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT