ರಾಯಚೂರು: ದಿಢೀರ್ ಪ್ರತಿಭಟನೆ ಆರಂಭಿಸಿರುವ ಸಾರಿಗೆ ನೌಕರರು

ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ನೌಕರರು ದಿಢೀರ್ ಪ್ರತಿಭಟನೆ ಆರಂಭಿಸಿದ್ದು, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತವಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
‘ಸರ್ಕಾರಿ ನೌಕಕರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವವರಿಗೆ ಪ್ರತಿಭಟನೆ ಮುಂದುವರಿಸಲಾಗುವುದು. ಪ್ರತಿಭಟನೆಯಲ್ಲಿ ಸಾರಿಗೆ ನೌಕರರ ಕುಟುಂಬಗಳ ಸದಸ್ಯರೂ ಭಾಗಯಾಗುವರು’ ಎಂದು ತಿಳಿಸಿದರು.
ಪ್ರಯಾಣಿಕರ ಪರದಾಟ: ಪ್ರತಿಭಟನೆ ಪೂರ್ವ ಮಾಹಿತಿಯಿಲ್ಲದೆ ಬಸ್ ನಿಲ್ದಾಣದತ್ತ ಬಂದಿರುವ ಪ್ರಯಾಣಿಕರು ಪರದಾಡುವ ಸ್ಥಿತಿ ಉದ್ಭವವಾಗಿದೆ.
ಸಿಂಧನೂರು, ಕೊಪ್ಪಳ, ಕರ್ನೂಲ್, ಹೈದರಾಬಾದ್ ಸೇರಿದಂತೆ ವಿವಿಧೆಡೆ ತೆರಳಬೇಕಾಗಿರುವ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಾ ಕುಳಿತಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.