ಶನಿವಾರ, ಜೂನ್ 6, 2020
27 °C

ರಾಯಚೂರಿಗೆ ತಲುಪಿದ 37 ಬಸ್‌ಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಿಂದ ಬೆಂಗಳೂರಿಗೆ ದುಡಿಯುವುದಕ್ಕಾಗಿ ಹೋಗಿದ್ದ ಕಾರ್ಮಿಕರನ್ನು 37 ಸರ್ಕಾರಿ ಬಸ್‌ಗಳ ಮೂಲಕ ಭಾನುವಾರ ತಡರಾತ್ರಿ ರಾಯಚೂರಿಗೆ ಕರೆತರಲಾಯಿತು. ಎಲ್ಲರಿಗೂ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಸ್ವಗ್ರಾಮಗಳಿಗೆ ತಲುಪಿಸಲಾಯಿತು.

ಸ್ವಗ್ರಾಮಕ್ಕೆ ಕಳುಹಿಸುವ ಪೂರ್ವದಲ್ಲಿ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಬಸ್‌ಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಂಬಂಧಿಗಳ ಮನೆಗಳಿಂದ ವಾಪಸ್ಸಾದವರು ಇದ್ದರು. ಮುಂದಿನ 14 ದಿನಗಳವರೆಗೆ ಮನೆಗಳಲ್ಲಿ ಕ್ವಾರಂಟೈನ್‌ ಆಗಿರಬೇಕು ಎಂದು ಅಧಿಕಾರಿಗಳು ಎಲ್ಲರಿಗೂ ಮನವರಿಕೆ ಮಾಡಿದರು.

ಉಪವಿಭಾಗಾಧಿಕಾರಿ ಸಂತೋಷ ಎಸ್‌.ಕೆ., ತಹಶೀಲ್ದಾರ್‌ ಹಂಪಣ್ಣ, ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು