ಮಸ್ಕಿ: ಉಪ ಚುನಾವಣೆ ಅಖಾಡಕ್ಕೆ ಶುಕ್ರವಾರದಿಂದ ಅಧಿಕೃತವಾಗಿ ತೊಡಗಿಸಿಕೊಳ್ಳಲು ಬಂದಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಸ್ಕಿಯಲ್ಲಿ ಹೂಮಳೆ ಸುರಿಸಿ ಸ್ವಾಗತಿಸಲಾಯಿತು.

ಮುದಗಲ್ ಪಟ್ಟಣದಿಂದ ಆಗಮಿಸಿದ ಅವರನ್ನು ಮಸ್ಕಿ ಕ್ಷೇತ್ರದ ಗಡಿಯಲ್ಲಿರುವ ಸಂತೆಕೆಲ್ಲೂರು, ಅಂಕುಶದೊಡ್ಡಿ ಗ್ರಾಮಗಳಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಮಸ್ಕಿ ಪಟ್ಟಣದಲ್ಲಿ ವಿಜಯೇಂದ್ರ ಅವರು ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರೆದ ವಾಹನ ಏರಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಬೈಕ್ ರ್ಯಾಲಿ ನಡೆಯಿತು. ಗಾಂಧಿ ನಗರದಲ್ಲಿ ನೂರಾರು ಯುವಕರು ಜೆಸಿಬಿ ಯಂತ್ರದ ಸಹಾಯದಿಂದ ಹೂವಿನ ಸುರಿಮಳೆ ಮಾಡಿದರು.

ಇದನ್ನೂ ಓದಿ... ಬಿಜೆಪಿ ಸರ್ಕಾರದ ಆಡಳಿತ ತುಘಲಕ್ ದರ್ಬಾರ್ ಇದ್ದಂಗೆ: ಕಾಂಗ್ರೆಸ್

ದಾರಿಯಲ್ಲಿ ಮಹಿಳೆಯರು ಆರತಿ ಬೆಳಗಿ ತಿಲಕ ಇಟ್ಟರು. ಅಗಸಿ, ಮುಖ್ಯ ಬಜಾರ, ದೈವದಕಟ್ಟೆ, ತೇರ ಬೀದಿ, ಕನಕವೃತ್ತ, ವಾಲ್ಮೀಕಿ ವೃತ್ತ, ಬಸವ ವೃತ್ತದ ಮೂಲಕ ಬಸವೇಶ್ವರ ನಗರದ ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.

ಕನಕವೃತ್ತದಲ್ಲಿ ಜೆಸಿಬಿ ಯಂತ್ರದ ಮೂಲಕ ಬೃಹತ್ ಹೂವಿನ ಹಾರ ಹಾಕಿ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು.

ಶಾಸಕ ರಾಜುಗೌಡ, ಡಾ. ಶಿವರಾಜ ಪಾಟೀಲ, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡ ಮಹಾದೇವಪ್ಪಗೌಡ ಪಾಟೀಲ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

ಇವನ್ನೂ ಓದಿ...

ಕಲ್ಯಾಣ ಕರ್ನಾಟಕದ ವಿರೋಧಿ ಮಲ್ಲಿಕಾರ್ಜುನ ಖರ್ಗೆ: ಬಿಜೆಪಿ ಟ್ವೀಟ್

ಆರ್ಎಸ್ಎಸ್, ಬಿಜೆಪಿ ಸಿದ್ಧಾಂತವು ವಿಷಕಾರಿ: ಮಲ್ಲಿಕಾರ್ಜುನ ಖರ್ಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.