ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಮಳೆಗೆ ಕೊಚ್ಚಿಹೋದ ಬಿ.ಯದ್ಲಾಪುರು ರಸ್ತೆ

Published 22 ಆಗಸ್ಟ್ 2024, 14:15 IST
Last Updated 22 ಆಗಸ್ಟ್ 2024, 14:15 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ.

ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.

ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ ಹೋಗುವುದರಿಂದ ರಸ್ತೆ ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಈಚೆಗೆ ಮಳೆ ಅಬ್ಬರಿಸಿದ ಸಂದರ್ಭದಲ್ಲೇ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿಪತ್ರ ಕೊಟ್ಟು ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದೇವೆ. ‘ಇದೀಗ ಬುಧವಾರ ರಾತ್ರಿ ಸುರಿದ ಮಳೆಗೆ ರಸ್ತೆ ಮತ್ತಷ್ಟು ಹಾಳಾಗಿದೆ’ ಎಂದು ಗ್ರಾಮದ ನಿವಾಸಿ ವೀರ ಪ್ರತಾಪ ರೆಡ್ಡಿ ತಿಳಿಸಿದ್ದಾರೆ.

ದೇವದುರ್ಗ, ಕವಿತಾಳ, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT