ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ವಿಜ್ಞಾನ ಕೇಂದ್ರದ ಉನ್ನತೀಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಬೋಸರಾಜು

Published 24 ಫೆಬ್ರುವರಿ 2024, 15:23 IST
Last Updated 24 ಫೆಬ್ರುವರಿ 2024, 15:23 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರಿನಲ್ಲಿ 10 ಎಕರೆ ಪ್ರದೇಶದಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ₹22.25 ಕೋಟಿ ವೆಚ್ಚದಲ್ಲಿ ಕೆಟಗರಿ-2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಎನ್‌.ಎಸ್‌. ಬೋಸರಾಜು ತಿಳಿಸಿದ್ದಾರೆ.

‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆ ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯ ಸ್ಥಾಪಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ೆಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗಿತ್ತು’ ಎಂದು ಹೇಳಿದ್ದಾರೆ.

‘ಈ ವಿಜ್ಞಾನ ಕೇಂದ್ರ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ಸರ್ಕಾರದ ನ್ಯಾಷನಲ್‌ ಕೌನ್ಸಿಲ್‌ ಆಫ್‌ ಸೈನ್ಸ್‌ ಮ್ಯೂಸಿಯಂನ ಸ್ಕೀಮ್‌ ಫಾರ್‌ ಪ್ರಮೋಷನ್‌ ಆಫ್‌ ಕಲ್ಚರ್‌ ಆಫ್‌ ಸೈನ್ಸ್‌ನ ಮಾರ್ಗಸೂಚಿಯ ಅನ್ವಯ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತ್ತು. ಕೇಂದ್ರ ಸರ್ಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ- 2ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಪ್ರಸ್ತಾವ ಸಚಿವ ಸಂಪುಟಕ್ಕೆ ಸಲ್ಲಿಸಲಾಗಿತ್ತು. ಈ ಕೇಂದ್ರ ಉನ್ನತೀಕರಣದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT