ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಂಗಣ್ಣ ಕರಡಿ

Published 31 ಮಾರ್ಚ್ 2024, 15:12 IST
Last Updated 31 ಮಾರ್ಚ್ 2024, 15:12 IST
ಅಕ್ಷರ ಗಾತ್ರ

ಮಸ್ಕಿ: ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಅವರು ಪಕ್ಷದ ವರಿಷ್ಠರ ಸೂಚನೆ ಮೆರೆಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್‌ ಪರವಾಗಿ ಚುನಾವಣೆ ಪ್ರಚಾರ ನಡೆಸಲು ಮುಂದಾಗಿದ್ದಾರೆ.

ಭಾನುವಾರ ’ಪ್ರಜಾವಾಣಿ’ ಜೊತೆ ಮಾತನಾಡಿದ ಅವರು ಪಕ್ಷದ ವರಿಷ್ಠ ಬಿ.ಎಸ್.‌ಯಡಿಯೂಪರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಅನೇಕ ಮುಖಂಡರು ಸಭೆ ನಡೆಸಿ ’ನನಗೆ ಆದ ಅನ್ಯಾಯದ ಬಗ್ಗೆ ದೆಹಲಿ ವರಿಷ್ಠರ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ನೀಡುವ ಭರವಸೆ ನೀಡಿದ್ದಾರೆ’ ಎಂದರು.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಉದ್ದೇಶವಾಗಿದೆ. ಪಕ್ಷದ ತಿರ್ಮಾನಕ್ಕೆ ನಾನು ಬದ್ಧನಾಗಿದ್ದು ಶೀಘ್ರದಲ್ಲಿಯೇ ಅಭ್ಯರ್ಥಿ ಪರವಾಗಿ ಕೊಪ್ಪಳ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT