ಸೋಮವಾರ, ಸೆಪ್ಟೆಂಬರ್ 27, 2021
22 °C

ಮಸ್ಕಿ: ತುಂಗಭದ್ರಾ ಕಾಲುವೆ ಸೋರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ತಾಲ್ಲೂಕು ವ್ಯಾಪ್ತಿಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಮೈಲ್-69ರ ಬಳಿ ಸಣ್ಣ ಪ್ರಮಾಣದಲ್ಲಿ ನೀರಿನ ಸೋರಿಕೆ ಕಂಡು ಬಂದಿದೆ.

ಸಣ್ಣ ರಂಧ್ರದ ಮೂಲಕ ನೀರು 0.5 ಕ್ಯುಸೆಕ್ ಹೊರ ಹೋಗುತ್ತಿದೆ. ಎಸ್ಕೇಪ್ ಗೋಡೆ ಮತ್ತು ಅದರ ಪಕ್ಕದಲ್ಲಿ ಹಾಕಿರುವ ಮಣ್ಣಿನ ನಡುವೆ ಈ ಸೋರಿಕೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

‘ಸಣ್ಣ ಪ್ರಮಾಣದ ಸೋರಿಕೆಯಿಂದ ಕಾಲುವೆಗೆ ಯಾವುದೇ ಧಕ್ಕೆ ಇಲ್ಲಾ. ರೈತರು ಆತಂಕ ಪಡಬೇಕಾಗಿಲ್ಲ. ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.