ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ ಸೀಲ್‌ಡೌನ್‌

Last Updated 2 ಜೂನ್ 2020, 16:44 IST
ಅಕ್ಷರ ಗಾತ್ರ

ಲಿಂಗಸುಗೂರು: ಇಲ್ಲಿನ ಫ್ಯಾಶನ್‌ ವಿಲ್ಲೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋವಿಡ್‌–19 ಪೀಡಿತ ವ್ಯಕ್ತಿ ಸ್ಥಳೀಯ ಕೆನರಾ ಬ್ಯಾಂಕ್‌ಗೆ ಬಂದು ಹೋಗಿದ್ದ ಎಂಬ ಮಾಹಿತಿ ಆಧರಿಸಿ ಅಲ್ಲಿನ ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಿ ಶಾಖೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕೋವಿಡ್‌–19 ಪೀಡಿತ ವ್ಯಕ್ತಿಯ ಟ್ರಾವೆಲ್‌ ಹಿಸ್ಟರಿ ಆಧರಿಸಿ ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಸೇರಿ ಪ್ರಾಥಮಿಕ ಸಂಪರ್ಕ ಹೊಂದಿದ 38 ಜನರನ್ನು ಗುರುತಿಸಲಾಗಿದೆ. ಈಗಾಗಲೆ ಕೆಲವರನ್ನು ಹೋಂ, ಇನ್ನೂ ಕೆಲವರನ್ನು ಇನ್‌ಸ್ಟಿಟ್ಯೂಷನಲ್‌ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಬ್ಯಾಂಕ್‌ ಒಳಗಡೆ ಹಾಗೂ ಹೊರಗಡೆ ಸ್ಯಾನಿಟೈಸ್ ಮಾಡಲಾಗಿದೆ.

ಸರ್ಜಾಪುರದ ಯುವಕ ಬೆಂಗಳೂರಿನಿಂದ ಬಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಧುಮೇಹ, ರಕ್ತದೊತ್ತಡ ಕಾಯಿಲೆಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದ. ಹೀಗಾಗಿ ಈತನ ಪ್ರಾಥಮಿಕ ಸಂಪರ್ಕ ಆಧಾರದ ಮೇಲೆ ಮೂವರು ವೈದ್ಯರು, 18 ಜನ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿ 35 ಜನರನ್ನು ಕ್ವಾರಂಟೈನ್‌ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಬಂದ್‌ ಮಾಡಲಾಗಿದೆ.

ಸಾರ್ವಜನಿಕ ಆಸ್ಪತ್ರೆಗೆ ನಿತ್ಯ 200 ರಿಂದ 300 ಹೊರ ರೋಗಿಗಳು ಬರುತ್ತಾರೆ. ಕೆನರಾ ಬ್ಯಾಂಕ್‌ನಲ್ಲಿ ಕೂಡ ಸಾಕಷ್ಟು ಗ್ರಾಹಕರು ವ್ಯವಹಾರಕ್ಕೆ ಬರುತ್ತಾರೆ. ಬ್ಯಾಂಕ್‌ ಅನ್ನು ಸೀಲ್‌ಡೌನ್‌ ಮಾಡಿರುವುದರಿಂದ ಗ್ರಾಹಕರಿಗೆ ತೊಂದರೆ ಆಗಿದೆ. ಬಡ ರೋಗಿಗಳು ಚಿಕಿತ್ಸೆ ಸಿಗದೆ ಹಿಡಿಶಾಪ ಹಾಕುತ್ತ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT