ಬುಧವಾರ, ಅಕ್ಟೋಬರ್ 5, 2022
27 °C

ರಾಯಚೂರು: ಬೈಕ್‌ಗೆ ಕ್ಯಾಂಟರ್ ಡಿಕ್ಕಿ, ತಂದೆ, ಮಗ ಸೇರಿ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಕ್ರಾಸ್ ಬಳಿ ರಾಜ್ಯಹೆದ್ದಾರಿಯಲ್ಲಿ ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಂದೆ, ಮಗ ಹಾಗೂ ಮಗುವಿನ ಚಿಕ್ಕಮ್ಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಪಕ್ಕದ ಕಲ್ಲೂರು ಗ್ರಾಮದ ಬಸವರಾಜ ಮಾಸಳಿ(40), ಭೀಮವ್ವ ಮಾಸಳಿ(50) ಹಾಗೂ ನರೇಶ್(8) ಮೃತರು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿ ಗ್ರಾಮಕ್ಕೆ ಕಲ್ಲೂರಿನಿಂದ ಬೈಕ್ ನಲ್ಲಿ ಹೊಗುವಾಗ ಅಪಘಾತವಾಗಿದೆ. ಕ್ಯಾಂಟರ್ ಮಾನ್ವಿಯಿಂದ ರಾಯಚೂರಿಗೆ ಬರುತ್ತಿತ್ತು.‌

ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ಕ್ಯಾಂಟರ್ ಪಕ್ಕದ ಜಮೀನಿಗೆ ನುಗ್ಗಿದೆ. ಮೃತ ದೇಹಗಳು ಜಮೀನಿನಲ್ಲಿ‌ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.  ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ... ಬೀದರ್ ಬಳಿ ಭೀಕರ ಅಪಘಾತ: ಗಾಣಗಾಪುರಕ್ಕೆ ಹೊರಟಿದ್ದ ಹೈದರಾಬಾದ್‌ನ ಐವರು ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು