ಕಾರು ಅಪಘಾತ: ಯುವಕ ಸಾವು

7

ಕಾರು ಅಪಘಾತ: ಯುವಕ ಸಾವು

Published:
Updated:

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಮುದಗಲ್‌ ಪಟ್ಟಣದ ಕತ್ತಿ ಹಳ್ಳದ ಸಮೀಪ ರಸ್ತೆ ಪಕ್ಕದಲ್ಲಿ ಹಾಕಿದ್ದ ಕಲ್ಲಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.

ಬಯ್ಯಾಪುರ ಗ್ರಾಮದ ಲಿಂಗನಗೌಡ ಎಸ್‌. ಪಾಟೀಲ (35) ಮೃತ ಯುವಕ. ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್‌ (ಆರ್‌ಡಿಸಿಸಿ) ನಿರ್ದೇಶಕ ಶಂಕರಗೌಡ ಪಾಟೀಲ ಅವರು ಮೃತ ಯುವಕನ ತಂದೆ. 

ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಮುದಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !