ಮಾನ್ವಿ: ‘ಅಂಗವಿಕಲರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲರಿಗೂ ಸುಲಭವಾಗಿ ಎಲ್ಲಾ ಕಡೆಗಳಲ್ಲಿ ಪ್ರವೇಶಿಸಬಹುದಾದ ಪರಿಸರ ಸೃಷ್ಟಿಸುವ ಅಗತ್ಯ ಇದೆ’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ದೀಪಾ ಅರಳಿಕಟ್ಟಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ರಿಮ್ಸ್ ಹಾಗೂ ದಿ ಅಸೋಷಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ ಸಂಯುಕ್ತಾಶ್ರಯದಲ್ಲಿ ಸುಗಮ್ಯ ಯಾತ್ರಾ ಕಾರ್ಯಕ್ರಮದ ಅಡಿಯಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸುಲಭ ಲಭ್ಯತೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರಿ ಕಚೇರಿ, ದೇವಸ್ಥಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಮತ್ತು ಎಲ್ಲಾ ಭಾಗಗಳಿಗೆ ಸಮಾನ ಪ್ರವೇಶ ಖಚಿತಪಡಿಸಲು ಎಸ್ ಟು ಎಕ್ಸಸ್ ಎನ್ನುವ ಆ್ಯಪ್ ರೂಪಿಸಲಾಗಿದೆ. ಅಂಗವಿಕಲರ ಪುನರ್ವಸತಿ ಕೇಂದ್ರದವರು ಅಂಗವಿಕಲರು ಸುಲಭವಾಗಿ ತಲುಪಲು ಸಾಧ್ಯವಾಗದೆ ಇರುವ ಸ್ಥಳಗಳನ್ನು ಆ್ಯಪ್ ಮೂಲಕ ದಾಖಲಿಸಿದಲ್ಲಿ ಮುಂದಿನ ದಿನಗಳಲ್ಲಿ ಅಂಥ ಸ್ಥಳಗಳಲ್ಲಿ ರ್ಯಾಂಪ್ ಸೇರಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ರಾಜು, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಹನುಮಂತ ಆರೋಲಿ, ಅಸೋಷಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿಯ ನಾಗರಾಜ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ರಾಘವೇಂದ್ರ, ಚನ್ನಬಸವೇಶ್ವರ ಅಂಧ ಮಕ್ಕಳ ಶಾಲೆ ಮುಖ್ಯಸ್ಥ ದೇಸಾಯಿ ದೂತರಬಂಡಿ, ಸಾವಿತ್ರಮ್ಮ, ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಸಂಘಟನೆ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಶೇಖರಪ್ಪ ಮುರ್ಕಿಗುಡ್ಡ, ಸಂಕಲ್ಪ ವಿಕಲಚೇತನರ ಸಂಘದ ಅಧ್ಯಕ್ಷ ಶಿವಕುಮಾರ ಚಲ್ಮಲ್, ವಿಜಯಕುಮಾರ ಗೌಡ, ಎಂ.ಡಿ.ಜಾಫರ್, ಹನುಮೇಶ ಕಾತರಕಿ, ಕೆ.ಬಾಷು ಖಾನ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ವಿಕಲಚೇತನರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.