ಕವಿತಾಳ: ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮುಖಂಡರು ಶುಕ್ರವಾರ ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿ ಸಂಭ್ರಮಿಸಿದ ಮುಖಂಡರು ಪರಸ್ಪರ ಸಿಹಿ ಹಂಚಿದರು.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಿರಲಿಂಗಪ್ಪ, ‘ಪರಿಶಿಷ್ಟ ಜಾತಿ, ಪಂಗಡದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹʼ ಎಂದರು.