ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಕಡ್ಡಾಯ ಪಡೆಯಿರಿ

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್‌ ತನ್ವೀರ್‌ ಆಸೀಫ್‌ ಹೇಳಿಕೆ
Last Updated 11 ಆಗಸ್ಟ್ 2021, 15:08 IST
ಅಕ್ಷರ ಗಾತ್ರ

ರಾಯಚೂರು: ಮಹಾಮಾರಿ ಕೊರೊನಾದಿಂದ ರಕ್ಷಿಸಿಕೊಂಡು ಇತರರನ್ನು ರಕ್ಷಿಸುವ ಸಲುವಾಗಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಹತ್ತಿರದ ಕೋವಿಡ್ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆಯನ್ನು ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಕರೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಜ್ಜುಗೊಳಿಸಿದ ‘ಕೋವಿಡ್-19ರ ಜಾಗೃತ ವಾಹನ’ಕ್ಕೆ ಬುಧವಾರ ಹಸಿರುನಿಶಾನೆ ತೋರಿಸಿ ಮಾತನಾಡಿದರು.

ಕೋವಿಡ್ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಕಾರಣ ಜಿಲ್ಲೆಯಲ್ಲಿ ಮುನ್ನಚೆರಿಕ ಕ್ರಮವಾಗಿ ಈಗಾಗಲೇ ಜಿಲ್ಲಾಡಳಿತದಿಂದ ಅತ್ಯಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ. ಮೂರನೇ ಅಲೆ ನಿಯಂತ್ರಣಕ್ಕೆ ಜನರ ಸಹಕಾರವು ಅತ್ಯಗತ್ಯವಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಲಸಿಕೆ ಬಗ್ಗೆ ತಪ್ಪುಗ್ರಹಿಕೆ ವ್ಯಾಪಕವಾಗಿದೆ. ಅದರೊಂದಿಗೆ ಬೇಜವಾಬ್ದಾರಿತನವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕೊರೊನಾವನ್ನು ದೂರವಿರಿಸಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಹೊರಗಡೆ ಬರುವಾಗ ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಅಧಿಕಾರಿ ಸಿ.ಕೆ. ಸುರೇಶ, ಆಗಸ್ಟ್‌ 11 ರಿಂದ 10 ದಿನಗಳವರೆಗೆ ರಾಯಚೂರು ಜಿಲ್ಲೆಯಲ್ಲಿ ಕೊರೊನಾ ವಿರುದ್ಧ ಜಾಗೃತಿ ವಾಹನವು ಸಂಚರಿಸಿ ಜನರಲ್ಲಿ ಅರಿವು ಮೂಡಿಸಲಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ರಾಮಕೃಷ್ಣ, ತಾಲ್ಲೂಕು ಆರೋಗ್ಯಧಿಕಾರಿ ಡಾ. ಎಂ.ಡಿ ಶಕೀರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷೀ ಮುಂಡಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT