ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಕಾಮಗಾರಿ ಪರಿಶೀಲಿಸಿದ ಸಿಇಒ

Last Updated 12 ಜನವರಿ 2022, 15:24 IST
ಅಕ್ಷರ ಗಾತ್ರ

ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತಾಲ್ಲೂಕಿನ ಚಂದ್ರಬಂಡಾ ಮತ್ತು ಯಾಪಲದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಗತಿ ಹಂತದಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನೂರ ಜಹಾರಾ ಖಾನಂ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಚಂದ್ರಬಂಡಾ ಗ್ರಾಮ ಪಂಚಾಯಿತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡ, ಬಿಸಿಯೂಟದ ಅಡುಗೆ ಕೋಣೆ, ಗೋದಾಮು ನಿರ್ಮಾಣ, ಸಿ.ಸಿ ರಸ್ತೆ ಮತ್ತು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಆನಂತರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆಮನೆಗೆ ನಳದ ಸಂಪರ್ಕ ಕಲ್ಪಿಸಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡು ಗುಣಮಟ್ಟದ ಪೈಪ್‌ಲೈನ್ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿವೀಕ್ಷಣೆ ಮಾಡಿದರು. ಆ ಬಳಿಕ ಯಾಪಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿ ವಡ್ಡೆಪಲ್ಲಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿದಿನ ಕಡ್ಡಾಯವಾಗಿ ಎರಡು ಬಾರಿ ಎನ್.ಎಂ.ಆರ್ ಕೂಲಿ ಕಾರ್ಮಿಕರ ಹಾಜರಾತಿಯನ್ನು ಸಂಬಂದಪಟ್ಟ ಗ್ರಾಮ ಕಾಯಕ ಮಿತ್ರರು ತೆಗೆದುಕೊಳ್ಳಬೇಕೆಂದು ಸೂಚಿಸಿದರು.

ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಕಂಪೌಂಡ್ ಕಾಮಗಾರಿಯನ್ನು ವೀಕ್ಷಣೆ ಜೊತೆಗೆ ಕಾಮಗಾರಿಯ ಗುಣಮಟ್ಟ, ನರೇಗಾ ಯೋಜನೆಯಡಿ ಸಿಗುವ ಸೌಲಭ್ಯ ಮಾಹಿತಿಗಳ ಕುರಿತು ಅಲ್ಲಿಯ ಕೂಲಿ ಕಾರ್ಮಿಕರ ಜೊತೆಗೆ ಮಾಹಿತಿಯನ್ನು ಕಲೆಹಾಕಿದರು.

ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಎಮ್.ಐ.ಎಸ್. ಸಂಯೋಜಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT