ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಟೆಕ್‌ ಗ್ರಂಥಾಲಯಕ್ಕೆ ಜಿ.ಪಂ ಸಿಇಒ ಭೇಟಿ

Last Updated 30 ಏಪ್ರಿಲ್ 2021, 13:24 IST
ಅಕ್ಷರ ಗಾತ್ರ

ದೇವಸೂಗೂರು (ಶಕ್ತಿನಗರ): ‘ಗ್ರಂಥಾಲಯದಲ್ಲಿ ಸುಮಾರು ಐದು ಸಾವಿರ ಪುಸ್ತಕಗಳಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಹೇಳಿದರು.

ದೇವಸೂಗೂರು ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಹೈಟೆಕ್ ಗ್ರಂಥಾಲಯ ಕಟ್ಟಡ ವೀಕ್ಷಿಸಿ ಮಾತನಾಡಿದರು.

ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14ನೇ ಹಣಕಾಸು ಯೋಜನೆ ಅಡಿ ಮತ್ತು ಕರದ ಹಣ ಒಟ್ಟು ₹4.70 ಲಕ್ಷ ವೆಚ್ಚದಲ್ಲಿ ಹೈಟೆಕ್ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ.

ಶುದ್ಧ ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಅಂತರ್ಜಾಲದ ವ್ಯವಸ್ಥೆ, ಸಾರ್ವಜನಿಕರ ಓದಲು ಆಸನಗಳ ವ್ಯವಸ್ಥೆ, 5 ಕಂಪ್ಯೂಟರ್‌ಗಳ ಅಳವಡಿಕೆ ಮತ್ತು ಉದ್ಯಾನ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಮಡೋಳಪ್ಪ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಮರೆಡ್ಡಿ ಪಾಟೀಲ್, ದೇವಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂಗನಗೌಡ ಹಾಗೂ ಪಿಡಿಒ ರವಿಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT