ಬುಧವಾರ, ಆಗಸ್ಟ್ 4, 2021
24 °C

ರಾಯಚೂರು | ಸಿಇಟಿ ಪರೀಕ್ಷೆ ಬರೆದ 3,869 ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ 14 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿಜ್ಞಾನದ 3,869 ವಿದ್ಯಾರ್ಥಿಗಳು ಗುರುವಾರ ಪರೀಕ್ಷೆಯನ್ನು ಬರೆದಿದ್ದಾರೆ. ಎಲ್ಲ ಕಡೆ ಶಾಂತಿಯುತವಾಗಿ ಪರೀಕ್ಷೆ ನಡೆದಿದೆ.

‍ಪರೀಕ್ಷೆ ಬರೆಯುವುದಕ್ಕೆ 4,405 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 536 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದಾರೆ. ರಾಯಚೂರಿನಲ್ಲಿ 10, ಸಿಂಧನೂರು ಮತ್ತು ಲಿಂಗಸುಗೂರಿನಲ್ಲಿ ತಲಾ ಎರಡು ಪರೀಕ್ಷಾ ಕೇಂದ್ರಗಳಿದ್ದವು. ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಲ್ಲ ಕಡೆಗೂ ಪೊಲೀಸರು ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದರು.

ಸಿಂಧನೂರಿನ ಪಿಡಬ್ಲುಡಿ ಕ್ಯಾಂಪ್‌ ದುದ್ದುಪುಡಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 468 ಅತಿಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ, ರಾಯಚೂರಿನ ಪ್ರಮಾಣ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 164 ಅತಿಕಡಿಮೆ ವಿದ್ಯಾರ್ಥಿಗಳಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು