ಸೋಮವಾರ, ಜೂನ್ 14, 2021
26 °C

ಸಿಇಟಿ ಪರೀಕ್ಷೆ: 433 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸೋಮವಾರ ಶಾಂತಿಯುತವಾಗಿ ನಡೆಯಿತು.

ವಿಜ್ಞಾನದಲ್ಲಿ ಪಿಯುಸಿ ದ್ವಿತೀಯ ಪರೀಕ್ಷೆ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆದರು. 433 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದರು. ಜಿಲ್ಲೆಯಲ್ಲಿ 3,091 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕಾಗಿ ನೋಂದಣಿ ಮಾಡಿಕೊಂಡಿದ್ದರು.

ಬಾಲಯೇಸು ಸಂಯುಕ್ತ ಪಿಯು ಕಾಲೇಜು, ವಿದ್ಯಾನಿಧಿ ಪಿಯು ಕಾಲೇಜು, ಸರ್ಕಾರಿ ಬಾಲಕರ ಪಿಯು ಕಾಲೇಜು, ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ಪ್ರಮಾಣ ಪಿಯು ಕಾಲೇಜು, ಆಲ್‌ ಕರೀಂ ಮಹಿಳಾ ಪಿಯು ಕಾಲಜಿನಲ್ಲಿ ಸಿಇಟಿ ಪರೀಕ್ಷೆ ನಡೆಯಿತು.

ಮೊದಲ ದಿನ ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಏಪ್ರಿಲ್‌ 30 ರಂದು ಭೌತವಿಜ್ಞಾನ ಮತ್ತು ರಾಸಾಯನವಿಜ್ಞಾನ ವಿಷಯಗಳ ಪರೀಕ್ಷೆ ಬರೆಯುವರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು