ರಾಜ್ಯಮಟ್ಟದ ಚದುರಂಗ ಸ್ಪರ್ಧೆ ಆರಂಭ

7

ರಾಜ್ಯಮಟ್ಟದ ಚದುರಂಗ ಸ್ಪರ್ಧೆ ಆರಂಭ

Published:
Updated:
Deccan Herald

ರಾಯಚೂರು: ನಗರದ ಸೇಠ್ ಚುನಿಲಾಲ್ ಅಮರಚಂದ ಬೋಹರಾ ಕಾನೂನು ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ಆಯೋಜಿಸಿರುವ ರಾಜ್ಯಮಟ್ಟದ ಪುರುಷ ಮತ್ತು ಮಹಿಳೆಯರ ಅಂತರ ಕಾಲೇಜುಗಳ ಎರಡು ದಿನಗಳ ಚದುರಂಗ ಸ್ಪರ್ಧೆ ಶುಕ್ರವಾರ ಆರಂಭವಾಗಿದೆ.

ರಾಯಚೂರು ಕೃವಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಸಚಿವ ಗುತ್ತಿ ಜಂಬುನಾಥ ಅವರು ಸ್ಪರ್ಧೆಯನ್ನು ಉದ್ಘಾಟಿಸಿದರು. ಆನಂತರ ಮಾತನಾಡಿದ ಅವರು, ಚದುರಂಗದಾಟವು ಜೀವನಕ್ಕೆ ಅತಿ ಹತ್ತಿರವಾದುದು. ಚದುರಂಗದಾಟದಲ್ಲಿ ನಡೆಸುವ ದಾಳಗಳು ಆಟದಲ್ಲಿ ಎಷ್ಟು ಮಹತ್ವದ್ದಾಗಿದೆಯೋ, ಜೀವನದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳು ಅಷ್ಟೇ ಮಹತ್ವವನ್ನು ಪಡೆದುಕೊಂಡಿರುತ್ತವೆ ಎಂದು ಹೇಳಿದರು.

ರಾಷ್ಟ್ರೀಯ ಕಿರಿಯರ ಹಾಕಿ ತಂಡದ ಕರ್ನಾಟಕದ ಪ್ರತಿನಿಧಿ ಬೆನ್ನೂರ್ ಬಿನ್ನಿ ಮಾತನಾಡಿ, ಪ್ರತಿಯೊಬ್ಬ ಸ್ಪರ್ಧಿಯು ಸ್ಪರ್ಧೆಗೆ ಸಿದ್ಧಗೊಳ್ಳುವ ಬಗೆಯನ್ನು ತಿಳಿಸಿದರು.

ಅಧ್ಯಕ್ಷತೆ ತಾರಾನಾಥ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಸ್ಕಿ ನಾಗರಾಜ ಮಾತನಾಡಿ, ರಾಯಚೂರಿನ ಎಸ್.ಸಿ.ಎ.ಬಿ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯನ್ನು ನಡೆಸುತ್ತಿರುವುದು ಅತ್ಯಂತ ಹರ್ಷದಾಯಕವಾಗಿದೆ ಎಂದರು.

ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಚೇರಮನ್‌ ಬಿ. ವೀರಭದ್ರಪ್ಪ ಸ್ವಾಗತಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಎಂ. ವಿಜಯಕುಮಾರ ವಂದಿಸಿದರು. ಕಾರ್ಯಕ್ರಮದಲ್ಲಿ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎ.ಎಂ. ಮಲ್ಲಿಕಾರ್ಜುನಯ್ಯ ಹಾಗೂ ನಾರಾಯಣಸ್ವಾಮಿ ಜಿ. ಪರಿಚಯಿಸಿದರು. ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಗೋಪಿನಾಥ ಕೊಪ್ಪರ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !