ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕ ಯಲ್ಲಪ್ಪ ಸಾನಬಾಳಗೆ ಮುಖ್ಯಮಂತ್ರಿ ಚಿನ್ನದ ಪದಕ

Published 25 ಜನವರಿ 2024, 15:46 IST
Last Updated 25 ಜನವರಿ 2024, 15:46 IST
ಅಕ್ಷರ ಗಾತ್ರ

ಕವಿತಾಳ: ಪಾಮನಕಲ್ಲೂರು ಗ್ರಾಮದ ನಿವಾಸಿ ಪ್ರಸ್ತುತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರೀಯ 7ನೇ ಘಟಕದಲ್ಲಿ ಹವಾ ನಿಯಂತ್ರಿತ ಬಸ್‌ನ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಯಲ್ಲಪ್ಪ ಸಾನಬಾಳ ಅವರು ಮುಖ್ಯಮಂತ್ರಿಗಳ ಸ್ವರ್ಣ ಪದಕ ಪಡೆದಿದ್ದಾರೆ.

7 ವರ್ಷಗಳ ಅವಧಿಯಲ್ಲಿ ಅಪಘಾತ ರಹಿತ ಮೋಟಾರು ವಾಹನ ಚಾಲನಾ ಸೇವೆಗಾಗಿ 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ನಡೆದ ಚಾಲಕರ ದಿನದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ಅಪಘಾತ ರಹಿತ ವಾಹನ ಚಾಲನೆಗಾಗಿ ಈ ಹಿಂದೆ ಯಲ್ಲಪ್ಪ ಸಾನಬಾಳ ಅವರು ಬೆಳ್ಳಿ ಪದಕವನ್ನು ಪಡೆದಿದ್ದರು. 2007 ರಿಂದ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT