ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಸಿದ್ದರಾಮಯ್ಯ ಅ.4ರಿಂದ ರಾಯಚೂರು ಜಿಲ್ಲೆ ಪ್ರವಾಸ

Published : 1 ಅಕ್ಟೋಬರ್ 2024, 14:31 IST
Last Updated : 1 ಅಕ್ಟೋಬರ್ 2024, 14:31 IST
ಫಾಲೋ ಮಾಡಿ
Comments

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4 ಹಾಗೂ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅ.4ರಂದು ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಬರುವರು. ಅಲ್ಲಿಂದ ಮಧ್ಯಾಹ್ನ 12.15ಕ್ಕೆ ಸಿಂಧನೂರಿಗೆ ಬಂದು ದಸರಾ ಮಹೋತ್ಸವ, ಕಲ್ಯಾಣ ಸೌಹಾರ್ಧ ನಡೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸಿಂಧನೂರಿನಿಂದ ಕಲ್ಮಲಾ ಜಂಕ್ಷನ್‌ ವರೆಗೆ ₹ 1635 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವರು. ಗೊರೆಬಾಳ ಕ್ಯಾಂಪ್‌ನಿಂದ ಗಾಂಧಿನಗರ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು. ರಾತ್ರಿ 9 ಗಂಟೆಗೆ ಸಿಂಧನೂರಿಂದ ರಾಯಚೂರಿಗೆ ಬಂದು ವಾಸ್ತವ್ಯ ಮಾಡುವರು.

ಅ.5ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕರ್ನಾಟಕ ಸಂಭ್ರಮ–50 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಬೆ. 11.30ಕ್ಕೆ ರಾಯಚೂರಿನಿಂದ ರಸ್ತೆ ಮಾರ್ಗವಾಗಿ ಮಾನ್ವಿಗೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ನಂತರ ಸಾರ್ವಜನಿಕ ಸಭೆ ನಡೆಸುವರು. ಸಂಜೆ 5 ಗಂಟೆಗೆ ರಸ್ತೆ ಮಾರ್ಗವಾಗಿ ಕೊಪ್ಪಳದ ಗಿಣಿಗೇರಾ ತೆರಳುವರು. ಅಲ್ಲಿಂದ ರಾತ್ರಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದ್ದಾರೆ.

ಮುಖ್ಯಮಂತ್ರಿ ಅವರಿಗೆ ಝಡ್‌ ಪ್ಲಸ್‌ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಮುಖ್ಯಮಂತ್ರಿಯೊಂದಿಗೆ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಪ್ರಯಾಣಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT