ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.30ಕ್ಕೆ ಸಿಂಧನೂರಿಗೆ

Published 28 ಡಿಸೆಂಬರ್ 2023, 15:55 IST
Last Updated 28 ಡಿಸೆಂಬರ್ 2023, 15:55 IST
ಅಕ್ಷರ ಗಾತ್ರ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್‌ 30ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಡಿ.30ರಂದು ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್‌ನಲ್ಲಿ ಬೆಳಿಗ್ಗೆ 10.20ಕ್ಕೆ ಬಂದಿಳಿದು, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಬೆಳಿಗ್ಗೆ 11.05ಕ್ಕೆ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಆಗಮಿಸುವರು.

ಸಿಂಧನೂರು ಕಾಲೇಜು ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ತಿಮ್ಮಾಪುರ ಏತ ನೀರಾವರಿ ಯೋಜನೆ ಉದ್ಘಾಟಿಸುವರು. ಜಲಜೀವನ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು. ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ಸಂಭ್ರಮ–50ರ ಕನ್ನಡ ಮೆರವಣಿಗೆಗೆ ಚಾಲನೆ ನೀಡುವರು. ನಂತರ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.

ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಕೊಪ್ಪಳ ಜಿಲ್ಲೆಯ ಗಿಣಿಗೇರಾ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT