ರಾಯಚೂರು: ‘ಬಾಲ್ಯ ವಿವಾಹವು ಅತ್ಯಂತ ಕೆಟ್ಟ ಪಿಡುಗಾಗಿದ್ದು, ಇದು ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತದೆ. ಹಲವು ರೀತಿ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ’ ಎಂದು ಹಿರಿಯ ಶ್ರೇಣಿ ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಎಚ್ಚರಿಸಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಬಾಲ್ಯ ವಿವಾಹ ನಿಷೇಧ ಜಾಗೃತಿ ಸಂಚಾರ ರಥಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

‘ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮದುವೆ ಮಾಡಿಕೊಳ್ಳುವವರಿಗೆ, ಮಾಡುವವರಿಗೆ, ಬೆಂಬಲ ನೀಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರಂತೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ಹೀಗಾಗಿ ಮಕ್ಕಳು ಹುಡುಗಿಗೆ 18 ವರ್ಷ ಹಾಗೂ ಹುಡುಗನಿಗೆ 21 ವರ್ಷ ತುಂಬುವವರೆಗೆ ಯಾವುದೇ ಕಾರಣಕ್ಕೂ ವಿವಾಹ ಮಾಡಿಕೊಳ್ಳಬಾರದು’ ಎಂದು ಹೇಳಿದರು.

‘ಉತ್ತಮವಾಗಿ ವಿದ್ಯಾಭ್ಯಾಸ ಮಾಡುವ ಮೂಲಕ ನಿಮ್ಮ ಭವಿಷ್ಯ ರೂಪಿಸಿಕೊಳ್ಳುವ ಕಡೆಗೆ ಗಮನ ಹರಿಸಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ ಹಾವಿನ ಮಾತನಾಡಿ, ‘ಮಕ್ಕಳು ವಿದ್ಯಾರ್ಥಿ ದಿಸೆಯಲ್ಲಿ ಶಿಕ್ಷಣದ ಕಡೆಗೆ ಒತ್ತು ನೀಡಿ ಚೆನ್ನಾಗಿ ಅಭ್ಯಾಸ ಮಾಡಿ ತಂದೆ–ತಾಯಿಯ ಗೌರವ ಮತ್ತು ಕೀರ್ತಿಯನ್ನು ಹೆಚ್ಚಿಸಬೇಕು’ ಎಂದರು.

ಪ್ರಮುಖ ರಸ್ತೆಗಳಲ್ಲಿ ಸಂಚಾರ: ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಿಂದ ನಗರದ ಸ್ಟೇಷನ್ ವೃತ್ತದವರೆಗೆ ಬಾಲ್ಯ ವಿವಾಹ ಜಾಗೃತಿ ಕುರಿತು ಸಂಚಾರ ರಥ ವಾಹನದ ಮೂಲಕ ಮಕ್ಕಳೊಂದಿಗೆ ಜಾಥಾ ನಡೆಯಿತು.

ಇದಕ್ಕೂ ಮುಂಚೆ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧದ ಕುರಿತು ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ನವೀನಕುಮಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸುದರ್ಶನ್, ಕಾಲೇಜಿನ ಪ್ರಾಚಾರ್ಯ ಕುಂಟೆಪ್ಪ, ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್ ಹಾಗೂ ಮಾರ್ಗದರ್ಶಿ ಸಂಸ್ಥೆಯ ಅನಂದರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.