ಗುರುವಾರ , ಮೇ 6, 2021
22 °C

ಮಾನ್ವಿ | ಶಾಲಾ ವ್ಯಾನ್‌ಗೆ ಜೋತುಬಿದ್ದ ಮಗು: ಚಾಲಕನ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ವಿದ್ಯಾರ್ಥಿಯೊಬ್ಬನನ್ನು ಶಾಲಾ ವಾಹನದ ಫುಟ್‌ಬೋರ್ಡ್‌ ಮೇಲೆ ನಿಲ್ಲಿಸಿಕೊಂಡು ವಾಹನ ಚಲಾಯಿಸಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಜಿಲ್ಲೆಯ ಮಾನ್ವಿ ಪಟ್ಟಣದ ಖಾಸಗಿ ಶಾಲಾ ವಾಹನ ಚಾಲಕನ ವಿರುದ್ಧ ಐಪಿಸಿ ಸೆಕ್ಷೆನ್‌ 279 ಹಾಗೂ 336 ಅಡಿ ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ರಾಮಯ್ಯ ತಿಪ್ಪಯ್ಯ ಚಾಲಕನನ್ನು ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಶಾಲಾ ವಿದ್ಯಾರ್ಥಿಯೊಬ್ಬನನ್ನು ಮಿನಿ ವಾಹನದ ಹೊರಗಡೆ ನಿಲ್ಲಿಸಿಕೊಂಡು ವಾಹನ ಓಡಿಸುತ್ತಿರುವುದನ್ನು ಗಮನಿಸಿದ್ದ ಸಾರ್ವಜನಿಕರೊಬ್ಬರು ವಿಡಿಯೊ ಚಿತ್ರೀಕರಣ ಮಾಡಿ ಪೊಲೀಸರಿಗೆ ರವಾನಿಸಿದ್ದರು. ಇದೀಗ ವಿಡಿಯೊ ವೈರಲ್‌ ಆಗಿದೆ.

ಶಾಲಾ ವಾಹನಗಳು ಶಿಸ್ತು ಉಲ್ಲಂಘಿಸಿ ವಿದ್ಯಾರ್ಥಿಗಳ ಜೀವದ ಜೊತೆಗೆ ಚೆಲ್ಲಾಟವಾಡಬಾರದು. ಅಂಥ ಪ್ರಕರಣಗಳು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.