ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯದ್ಲಾಪುರ: ಮಕ್ಕಳ ಹಕ್ಕುಗಳ ಗ್ರಾಮಸಭೆ

Last Updated 6 ಫೆಬ್ರುವರಿ 2021, 11:24 IST
ಅಕ್ಷರ ಗಾತ್ರ

ಶಕ್ತಿನಗರ: ‘ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವಲ್ಲಿ ಮಕ್ಕಳ ಗ್ರಾಮ ಸಭೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ’ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಶ ಅಭಿಪ್ರಾಯಪಟ್ಟರು.

ಡಿ.ಯದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

‘ಮಕ್ಕಳ ಸಮಸ್ಯೆಗಳನ್ನು ನೇರವಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಜತೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲು ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಗ್ರಾಮಸಭೆ ವೇದಿಕೆಯಾಗಿದೆ. ಹಕ್ಕುಗಳ ಕುರಿತು ಅವರಿಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಮೀನುಗಾರಿಕೆ ಇಲಾಖೆಯ ಅಧಿಕಾರಿ ಸುಮಾ, ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಚನ್ನಮ್ಮ, ಶಕ್ತಿನಗರ ಠಾಣೆ ಎಎಸ್‌ಐ ತಿಪ್ಪಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ವಸಂತ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT