ಗುರುವಾರ , ಜುಲೈ 7, 2022
23 °C

ಮಾನ್ವಿ: ಚೌಡೇಶ್ವರಿ ದೇವಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ಪಟ್ಟಣದ ಶ್ರೀರಾಮಲಿಂಗ ಚೌಡೇಶ್ವರಿ ದೇವಿಯ ಜಾತ್ರೆಯ ಪ್ರಯುಕ್ತ ಬುಧವಾರ ರಥೋತ್ಸವ ನಡೆಯಿತು.

ಕೋವಿಡ್ ಮಾರ್ಗಸೂಚಿ ಅನ್ವಯ ದೇವಸ್ಥಾನದಲ್ಲಿ ಭಕ್ತರಿಗೆ ಚೌಡೇಶ್ವರಿ ದೇವಿಯ ದರ್ಶನ ಹಾಗೂ ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ನಿಯಮ ಉಲ್ಲಂಘನೆ: ರಥೋತ್ಸವದಲ್ಲಿ ನಂದಿಕೋಲು ಕುಣಿತ ಸೇರಿದಂತೆ ವಿವಿಧ ವಾದ್ಯ ಮೇಳಗಳು ಭಾಗವಹಿಸಿದ್ದವು. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರೂ ಭಾಗವಹಿಸಿದ್ದರು. ಈ ವೇಳೆ ಯಾರೂ ಕೋವಿಡ್‌ ನಿಯಮಗಳನ್ನು ಪಾಲಿಸಿರಲಿಲ್ಲ. 

ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ಪುರಸಭೆಯ ಸದಸ್ಯ ರಾಜಾ ಮಹೇಂದ್ರನಾಯಕ, ಎಇ.ಬಿ.ಉಪ್ಪಳಮಠ, ಗುಮ್ಮಾ ಬಸವರಾಜ, ರಾಜಾ ರಾಮಚಂದ್ರನಾಯಕ, ಜಿ.ಶಿವಕುಮಾರ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು