ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಲು ಮನವಿ

Last Updated 9 ಡಿಸೆಂಬರ್ 2021, 13:59 IST
ಅಕ್ಷರ ಗಾತ್ರ

ರಾಯಚೂರು: ಬೆಳಗಾವಿಯಲ್ಲಿ ನಡೆಯವ ಚಳಿಗಾಲದ ಅಧಿವೇಶನದಲ್ಲಿ ಹಮಾಲಿ ಕಾರ್ಮಿಕರ ಭವಿಷ್ಯ ನಿಧಿ, ಬಜೆಟ್‌ನಲ್ಲಿ ₹500 ಕೋಟಿ ಹಣಕಾಸು ನೆರವು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಟ್ರೇಡ್ ಯುನಿಯನ್ (ಸಿಐಟಿಯು) ಜಿಲ್ಲಾ ಘಟಕದ ‍ಪದಾಧಿಕಾರಿಗಳು ಶಾಸಕ ಶಿವರಾಜ ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಹಮಾಲರ ಕಾರ್ಮಿಕರು ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಅವರಿಗೆ ಭವಿಷ್ಯನಿಧಿ ವಿಮಾ ಸೌಲಭ್ಯ ಬೋನಸ್ ಮೊದಲಾದ ಕಾರ್ಮಿಕ ಕಾನೂನುಗಳು ಜಾರಿಯಿಂದ ವಂಚಿತರಾಗಿದ್ದಾರೆ. ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಕಾರ್ಮಿಕ ಕಾನೂನುಗಳು ಜಾರಿಯಾಗುವಂತೆ ನಿಯಮ ರೂಪಿಸಬೇಕು ಎಂದರು.

ಹಮಾಲಿ ಕಾರ್ಮಿಕರು ಸೇರಿ ವಿವಿಧ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಸಿದ್ಧಪಡಿಸಿರುವ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಜಾರಿ ಮಾಡಬೇಕು. ಎಲ್ಲಾ ವಸತಿ ರಹಿತ ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆಯನ್ನು ಜಾರಿ ಮಾಡಬೇಕು. ಕೇಂದ್ರ ಸರ್ಕಾರ ಜಾರಿ ಮಾಡಿರುವ ಪ್ರಧಾನಮಂತ್ರಿ ಜೀವನ ಭೀಮಾ ಮತ್ತು ಸುರಕ್ಷಾ ಯೋಜನೆಗಳನ್ನು ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಗುರುತಿನ ಚೀಟಿ ನೀಡಿ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರೀತಿಯಲ್ಲಿ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕು. ಕೋವಿಡ್ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ಹಮಾಲಿ ಕಾರ್ಮಿಕರು ಸೇರಿ 11 ವಿಭಾಗದ ಅಸಂಘಟಿತ ಕಾರ್ಮಿಕರಿಗೆ ಕೂಡಲೇ ಪರಿಹಾರ ನೀಡಬೇಕು. ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ಡಿ.ಎಸ್. ಶರಣಬಸವ, ಪ್ರಹ್ಲಾದ್ ರೆಡ್ಡಿ, ಲಕ್ಷ್ಮೀ, ದೇವಮ್ಮ, ವರಲಕ್ಷ್ಮೀ, ಸಾಬಮ್ಮ, ನರಸಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT