ಮಂಗಳವಾರ, ಜನವರಿ 18, 2022
15 °C

‘ಡೆಂಗಿ ನಿಯಂತ್ರಣಕ್ಕೆ ಸ್ವಚ್ಛತೆ ಅವಶ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಕವಿತಾಳ: ‘ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಸೊಳ್ಳೆ ಪರದೆ ಮತ್ತು ಸೊಳ್ಳೆ ನಿಯಂತ್ರಕಗಳನ್ನು ಬಳಸಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಮಾನ್ವಿ ತಾಲ್ಲೂಕಿನ ಉಟಕನೂರು ಗ್ರಾಮದಲ್ಲಿ ಈಚೆಗೆ ಶಂಕಿತ ಡೆಂಗಿ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಮನೆ ಮನೆಗೆ ತೆರಳಿ ಮಾಹಿತಿ ನೀಡಿದ ಅವರು, ‘ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‍ ಮಾಡಲು ಕ್ರಮ ಕೈಗೊಳ್ಳುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ’ ಎಂದರು.

ತೀವ್ರ ಜ್ವರ, ಮೈ ಕೈ ನೋವು, ತಲೆ ನೋವು ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಗ್ರಾಮದ ಮಲ್ಲಯ್ಯ ಲಿಂಗರಾಜ (22) ಮತ್ತು ನಿರಜ್‍ ಶಿವಶಂಕರ್ (14) ಅವರಿಗೆ ಶಂಕಿತ ಡೆಂಗಿ ಎನ್ನಲಾಗಿದ್ದು, ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.  ಡೆಂಗಿ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಸೊಳ್ಳೆಗಳ ನಿಯಂತ್ರಣ ಅಗತ್ಯ’ ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಧೀರ್ ಬಾಬು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ನಾಗರತ್ನ ಮತ್ತಿತರರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.