ಮಾನ್ವಿ: ನ್ಯಾಕ್ ಸಮಿತಿಯಿಂದ ‘ಬಿ ಪ್ಲಸ್’ ಮಾನ್ಯತೆ ಪಡೆದ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಾಜ್ಯ ಸರ್ಕಾರ ಅಭಿನಂದನಾ ಪತ್ರ ನೀಡಿ ಗೌರವಿಸಿದೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಈಚೆಗೆ ರಾಜ್ಯ ಸರ್ಕಾರದ ವತಿಯಿಂದ ನೆಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೇಜಿನ ಪ್ರಾಂಶುಪಾಲ ಜೆ.ಎಲ್ ಈರಣ್ಣ ಅವರಿಗೆ ಅಭಿನಂದನಾ ಪತ್ರ ನೀಡಿದರು.
ಜು.30, 31 ರಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಸಮಿತಿಯು ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಐದು ವರ್ಷಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಲಭ್ಯಗಳ ಕುರಿತು ಮೌಲ್ಯಮಾಪನ ಮಾಡಿ‘ಬಿ ಪ್ಲಸ್’ ಮಾನ್ಯತೆ ನೀಡಿತ್ತು.
ಈ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ, ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇನ್ನಿತರರು ಉಪಸ್ಥಿತರಿದ್ದರು.