ಸೋಮವಾರ, ಸೆಪ್ಟೆಂಬರ್ 20, 2021
29 °C

‘ಸಿಎಂ ಶಾಸಕರ ಮನವೊಲಿಸುವರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ‘ಖಾತೆಗಳ ಹಂಚಿಕೆಯಿಂದ ಅತೃಪ್ತಗೊಂಡ ಶಾಸಕರನ್ನು ಸಮಾಧಾನಪಡಿಸುವ ಶಕ್ತಿ ಮುಖ್ಯಮಂತ್ರಿ ಅವರಿಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಎಲ್ಲವೂ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿಗಳಿಗೆ ನಮ್ಮ ಅವಶ್ಯಕತೆ ಇದ್ದರೆ ಅವರೊಂದಿಗೆ ಕೈ ಜೋಡಿಸುತ್ತೇವೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವಷ್ಟು ಶಕ್ತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ಭೇಟಿಗಾಗಿ ಬಂದಿದ್ದೇನೆ. ಆದರೆ, ತುರ್ತು ಕೆಲಸ ಇರುವುದರಿಂದ ಬೆಂಗಳೂರಿಗೆ ಹೋಗಬೇಕಾಗಿದೆ. ಭಾನುವಾರದ ಭೇಟಿ ಮೊಟಕುಗೊಳಿಸಿದ್ದೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.